Telegram Join Our Telegram WhatsApp Join Our WhatsApp

KREIS Recruitment 2026, Best Teacher Vacancies: ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಆರಂಭ. ಇಲ್ಲಿದೆ ಸಂಪೂರ್ಣ ಮಾಹಿತಿ

KREIS Recruitment ಮೂಲಕ 1087 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಕರ್ನಾಟಕದಲ್ಲಿ ಸರ್ಕಾರಿ ಶಿಕ್ಷಕರ ಉದ್ಯೋಗಕ್ಕಾಗಿ ಕಾಯುತ್ತಿರುವ ಅನೇಕ ಯುವಕ ಯುವತಿಯರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮತ್ತೊಂದು ಸುವರ್ಣ ಅವಕಾಶವನ್ನು ನೀಡಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ ಅಡಿಯಲ್ಲಿ ಬರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ನೇಮಕಾತಿ  ಅಧಿಸೂಚನೆಯನ್ನು ಹೊರಡಿಸಿದೆ.

ಈ KREIS Recruitment ಮೂಲಕ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ, ಗಣಕಯಂತ್ರ ಮತ್ತು ಚಿತ್ರಕಲಾ ವಿಭಾಗಗಳಲ್ಲಿ ಸೇರಿದಂತೆ ಒಟ್ಟು 1087 ಶಿಕ್ಷಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಮೂಲಕ ಆನ್ ಲೈನ್‌ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಸರ್ಕಾರಿ  ಶಿಕ್ಷಕರಾಗಿ ಸೇವೆ ಸಲ್ಲಿಸಲು ಬಯಸುವ ಪದವೀಧರರು, B.Ed ಪದವೀಧರರು, B.P.Ed ಪದವೀಧರರು, BFA/ BBA ಸಂಬಂಧಿತ ವಿಷಯಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವವರಿಗೆ ಈ ನೇಮಕಾತಿಯು ಉತ್ತಮ ಅವಕಾಶವಾಗಿದೆ. ವಿಶೇಷವಾಗಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಉತ್ತಮ ಬೆಳವಣಿಗೆ, ಶೈಕ್ಷಣಿಕ ಮತ್ತು ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಲು ಬಯಸುವಂತಹ ಅಭ್ಯರ್ಥಿಗಳು ಈ ಶಿಕ್ಷಕರ ನೇಮಕಾತಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಪ್ರಸ್ತುತ ಲೇಖನದಲ್ಲಿ ನೇಮಕಾತಿಯ ಹುದ್ದೆಗಳ ಮಾಹಿತಿ, ವಿದ್ಯಾರ್ಹತೆ, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದೆ. ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ

KREIS Recruitment ಪ್ರಮುಖ ಮಾಹಿತಿ

ವಿವರ ಮಾಹಿತಿ
ನೇಮಕಾತಿ ಸಂಸ್ಥೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಸಂಬಂಧಿತ ಸಂಸ್ಥೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS)
ನೇಮಕಾತಿ ವರ್ಷ 2026
ಹುದ್ದೆಗಳ ಹೆಸರು ವಿವಿಧ ವಿಷಯಗಳ ಶಿಕ್ಷಕರು
ಒಟ್ಟು ಹುದ್ದೆಗಳು 1087
ಉಳಿಕೆ ಮೂಲ ವೃಂದ 767
ಸ್ಥಳೀಯ ವೃಂದ 320
ಉದ್ಯೋಗ ಸ್ಥಳ ಕರ್ನಾಟಕ
ಅರ್ಜಿ ವಿಧಾನ ಆನ್‌‌ ಲೈನ್
ಅರ್ಜಿ ಪ್ರಾರಂಭ 15.07.2026
ಅರ್ಜಿ ಕೊನೆಯ ದಿನಾಂಕ 13.08.2026
ಶುಲ್ಕ ಪಾವತಿ ಕೊನೆಯ ದಿನಾಂಕ 14.08.2026
ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ

 

ಈ ನೇಮಕಾತಿಯ ಪ್ರಮುಖ ಪ್ರಯೋಜನಗಳು

  • ಶಾಶ್ವತ ಸರ್ಕಾರಿ ಉದ್ಯೋಗ
  • ಉತ್ತಮ ವೇತನ
  • ಸರ್ಕಾರಿ ಭತ್ಯೆಗಳು
  • ವೃತ್ತಿ ಬೆಳವಣಿಗೆ
  • ನಿವೃತ್ತಿ ಸೌಲಭ್ಯಗಳು
  • ಪಿಂಚಣಿ ಸೌಲಭ್ಯಗಳು
  • ವಾರ್ಷಿಕ ವೇತನ ಹೆಚ್ಚಳ

ಯಾವ ವಸತಿ ಶಾಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ?

ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿಯಾಗಿ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ವಿವಿಧ ವಸತಿ ಶಾಲೆಗಳನ್ನು ನಡೆಸಲಾಗುತ್ತಿದ್ದು, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಸತಿ, ಆಹಾರ, ಶಿಸ್ತು, ಕ್ರೀಡೆ ಮತ್ತು ಇತರ ಚಟುವಟಿಕೆಗಳಿಗೂ ಸಹ ಅವಕಾಶಗಳನ್ನು ಕಲ್ಪಿಸಲಾಗಿದೆ

ಈ ನೇಮಕಾತಿಯ ಮೂಲಕ ಈ ಕೆಳಕಂಡ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಅಭ್ಯರ್ಥಿಗಳು ಪಡೆಯಬಹುದಾಗಿರುತ್ತದೆ. ಅವುಗಳೆಂದರೆ,

  • ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು
  • ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು
  • ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು
  • ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳು
  • ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳು

ವಸತಿ ಶಾಲೆಗಳಲ್ಲಿ ಶಿಕ್ಷಕರ ಜವಾಬ್ದಾರಿಯು ಸಾಮಾನ್ಯ ಶಾಲೆಗಳಲ್ಲಿರುವ ಶಿಕ್ಷಕರಿಗಿಂತ ವಿಭಿನ್ನವಾಗಿರುತ್ತದೆ. ವಿದ್ಯಾರ್ಥಿಗಳು ವಸತಿ ವ್ಯವಸ್ಥೆಯ ಅಡಿಯಲ್ಲಿ ಇರುವುದರಿಂದ ಅವರ ಶಿಕ್ಷಣದ ಜೊತೆಗೆ ಶಿಸ್ತು ಪಾಲನೆ, ಅಧ್ಯಯನ ಚಟುವಟಿಕೆಗಳು ಮತ್ತು ವಿವಿಧ ರೀತಿಯ ಇತರ ಸಹಪಠ್ಯ ಚಟುವಟಿಕೆಗಳಲ್ಲಿಯೂ ಕೂಡ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ.

KREIS Recruitment 2026 ರ ಹುದ್ದೆಗಳ ವಿವರ

ವೃಂದವಾರು ಹುದ್ದೆಗಳ ಹಂಚಿಕೆ

ವೃಂದ ಖಾಲಿ ಇರುವ ಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ 767
ಕಲ್ಯಾಣ ಕರ್ನಾಟಕ ವೃಂದ 320
ಒಟ್ಟು ಹುದ್ದೆಗಳು 1087

 

ಈ KREIS Recruitment ಅಡಿಯಲ್ಲಿ ವಿವಿಧ ವಿಷಯಗಳಲ್ಲಿ ಒಟ್ಟು 1087 ಹುದ್ದೆಗಳು ಖಾಲಿ ಇದ್ದು ವಿಷಯವಾರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವಿವರ ಈ ಕೆಳಕಂಡಂತಿದೆ

ಕನ್ನಡ ಭಾಷಾ ಶಿಕ್ಷಕರು: 165 ಹುದ್ದೆಗಳು

ಕನ್ನಡ ವಿಷಯದಲ್ಲಿ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ 165 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನ್ನಡವನ್ನು ಐಚ್ಛಿಕ ವಿಷಯವಾಗಿ ಓದಿರಬೇಕು ಕಲಾ ವಿಭಾಗದಲ್ಲಿ ಸ್ನಾತಕ ಪದವಿಯನ್ನು ಪಡೆದಿರಬೇಕು ಅಥವಾ ನಾಲ್ಕು ವರ್ಷಗಳ ಕನ್ನಡ ಪಂಡಿತ್ ಕೋರ್ಸ್ ಉತ್ತೀರ್ಣರಾಗಿರಬೇಕು ಇದರ ಜೊತೆಯಲ್ಲಿ ಕನ್ನಡ ಬೋಧನಾ ಪದ್ಧತಿಯಲ್ಲಿ B.Ed ಪದವಿಯನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

ಆಂಗ್ಲ ಭಾಷಾ ಶಿಕ್ಷಕರು: 177 ಹುದ್ದೆಗಳು

ಇಂಗ್ಲಿಷ್ ವಿಷಯದಲ್ಲಿ ಸ್ನಾತಕ ಪದವಿ ಅಥವಾ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ಇಂಗ್ಲಿಷ್ ಭಾಷೆಯನ್ನು ಐಚ್ಚಿಕ ವಿಷಯವಾಗಿ ಓದಿರಬೇಕು ಅಥವಾ ನೇಮಕಾತಿ ಸೂಚನೆಯಲ್ಲಿ ತಿಳಿಸಲಾಗಿರುವಂತೆ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಂಗ್ಲೀಷ್ ಬೋಧನಾ ಪದ್ಧತಿಯಲ್ಲಿ B.Ed ಪದವಿಯನ್ನು ಹೊಂದಿರುವುದು ಅಗತ್ಯವಾಗಿದೆ

ಹಿಂದಿ ಭಾಷಾ ಶಿಕ್ಷಕರು: 86 ಹುದ್ದೆಗಳು

ಹಿಂದಿ ಭಾಷೆಯನ್ನು ಐಚ್ಛಿಕ ವಿಷಯವಾಗಿ ಓದಿ ಸ್ನಾತಕ ಪದವಿಯನ್ನು ಅಭ್ಯರ್ಥಿಗಳು ಪಡೆದಿರಬೇಕು. B.Ed ಪದವಿ ಹೊಂದಿರುವುದು ಅಥವಾ ಹಿಂದಿಯಲ್ಲಿ ಸ್ನಾತಕ ಪದವಿಯನ್ನು ಹೊಂದಿರುವುದು ಅಗತ್ಯ ವಿದ್ಯಾರ್ಹತೆಯಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಗಣಿತ ಶಿಕ್ಷಕರು: 138 ಹುದ್ದೆಗಳು

ಗಣಿತ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ವಿಜ್ಞಾನ ವಿಭಾಗದಲ್ಲಿ ಸ್ನಾತಕ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಗಣಿತ ಮತ್ತು ಭೌತಶಾಸ್ತ್ರ ವಿಷಯಗಳನ್ನು ಕಡ್ಡಾಯ ವಿಷಯಗಳಾಗಿ ಹಾಗೂ ರಸಾಯನ ಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಓದಿರುವುದು ಈ ಹುದ್ದೆಗೆ ಕಡ್ಡಾಯವಾಗಿದೆ. ಇದರ ಜೊತೆಗೆ ವಿಜ್ಞಾನ ಬೋಧನಾ ಪದ್ಧತಿಯಲ್ಲಿ B.Ed ಪದವಿಯನ್ನು ಹೊಂದಿರಬೇಕು

ವಿಜ್ಞಾನ ಶಿಕ್ಷಕರು: 138 ಹುದ್ದೆಗಳು

ವಿಜ್ಞಾನ ಶಿಕ್ಷಕರ ಹುದ್ದೆಗೆ ರಸಾಯನ ಶಾಸ್ತ್ರದ ಜೊತೆಗೆ ಸಸ್ಯಶಾಸ್ತ್ರ ಅಥವಾ ಪ್ರಾಣಿ ಶಾಸ್ತ್ರ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಮತ್ತು ವಿಜ್ಞಾನ ಬೋಧನಾ ಪದ್ಧತಿಯಲ್ಲಿ B.Ed ಪದವಿ ಕೂಡ ಅಗತ್ಯವಾಗಿರುತ್ತದೆ.

ಸಮಾಜ ವಿಜ್ಞಾನ ಶಿಕ್ಷಕರು: 178 ಹುದ್ದೆಗಳು

ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಯಲ್ಲಿ ಒಟ್ಟು 178 ಹುದ್ದೆಗಳು ಲಭ್ಯವಿದ್ದು ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಮತ್ತು ಭೂಗೋಳಶಾಸ್ತ್ರ  ಯಾವುದೇ ಎರಡು ವಿಷಯಗಳೊಂದಿಗೆ ಕಲಾವಿಭಾಗದಲ್ಲಿ ಸ್ನಾತಕ ಪದವಿಯನ್ನು ಪಡೆದಿರಬೇಕು ಕಲಾ ಭೋಧನಾ ಪದ್ಧತಿಯಲ್ಲಿ B.Ed ಪದವಿಯನ್ನು ಪಡೆಯುವುದು ಅಗತ್ಯವಾಗಿದೆ

ಈ ಹುದ್ದೆಗೆ ಪ್ರಮುಖವಾದ ವಿಷಯವೇನೆಂದರೆ ಅಭ್ಯರ್ಥಿಗಳು ತಮ್ಮ ಪದವಿ ಶಿಕ್ಷಣವನ್ನು ಆಂಗ್ಲ ಮಾಧ್ಯಮದಲ್ಲಿಯೇ ಕಡ್ಡಾಯವಾಗಿ ವ್ಯಾಸಂಗ ಮಾಡಿರಬೇಕು

ಗಣಕಯಂತ್ರ ಶಿಕ್ಷಕರು: 57 ಹುದ್ದೆಗಳು

ಗಣಕಯಂತ್ರ ಕ್ಷೇತ್ರದಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಗಣಕ ವಿಜ್ಞಾನ ಮತ್ತು ಮಾಹಿತಿ ಮತ್ತು ಮಾಹಿತಿ ವಿಜ್ಞಾನ ಇಂಜಿನಿಯರಿಂಗ್ ನಲ್ಲಿ ಸ್ನಾತಕ ಪದವಿಯ ಜೊತೆಗೆ BCA ಅಥವಾ BS.c Computer Science ಪದವಿಯನ್ನು ಹೊಂದಿರುವವರು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕರು: 114 ಹುದ್ದೆಗಳು

ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ 114 ಹುದ್ದೆಗಳು ಮೀಸಲಾಗಿದ್ದು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಹಾಗೂ ದೈಹಿಕ ಶಿಕ್ಷಣ ಸ್ನಾತಕೋತ್ತರ ಪದವಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.

ಪದವೀಧರ ಚಿತ್ರಕಲಾ ಶಿಕ್ಷಕರು: 17 ಹುದ್ದೆಗಳು

ಲಲಿತ ಕಲೆ ಅಥವಾ ದೃಶ್ಯಕಲೆ ಕ್ಷೇತ್ರದಲ್ಲಿ ಸ್ನಾತಕ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಪದವೀಧರ ಚಿತ್ರಕಲಾ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಡಿಪ್ಲೋಮಾ ಚಿತ್ರಕಲಾ ಶಿಕ್ಷಕರು: 17 ಹುದ್ದೆಗಳು

ರೇಖಾಚಿತ್ರ ಮತ್ತು ಚಿತ್ರಕಲೆಯಲ್ಲಿ ಡಿಪ್ಲೋಮಾ ಪದವಿಯನ್ನು ಹೊಂದಿರುವವರು ಅಥವಾ ತಾಂತ್ರಿಕ ಪರೀಕ್ಷೆ ಮಂಡಳಿಯಿಂದ ಆರ್ಟ್ಸ್ ಮಾಸ್ಟರ್ ಕೋರ್ಸ್‌ ನಲ್ಲಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

 

KREIS Recruitment ನ ವಿದ್ಯಾರ್ಹತೆ

ಮಾಹಿತಿ ಮೂಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ನೇಮಕಾತಿ ಅಧಿಸೂಚನೆ

ಈ KREIS Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ನಿಗಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಸಾಮಾನ್ಯವಾಗಿ ವಿವಿಧ ರೀತಿಯ ಶಿಕ್ಷಕರ ಹುದ್ದೆಗಳಿಗೆ ಪದವಿ ಮತ್ತು B.Ed ವಿದ್ಯಾರ್ಹತೆ ಹೊಂದಿರುವುದು ಅಗತ್ಯವಾಗಿದೆ.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಜೊತೆಗೆ ಅಧಿಸೂಚನೆಯಲ್ಲಿ ತಿಳಿಸಿರುವ ವಿಷಯ ಸಂಯೋಜನೆಗಳನ್ನು ಸಹ ಕಡ್ಡಾಯವಾಗಿ ಪರಿಶೀಲಿಸಬೇಕಾಗುತ್ತದೆ. ಕೇವಲ ಪದವಿ ಹೊಂದುವುದರಿಂದ ಮಾತ್ರ ಹುದ್ದೆಗಳು ಸಿಗದೇ ಯಾವ ವಿಷಯಗಳನ್ನು ಕಡ್ಡಾಯ ಅಥವಾ ಐಚ್ಚಿಕ ವಿಷಯಗಳಿಗೆ ಓದಿರಬೇಕು ಎಂಬುದನ್ನು ಸಹ ಪ್ರತ್ಯೇಕ ಹುದ್ದೆಗೆ ನಿಗದಿಪಡಿಸಲಾಗಿರುವುದನ್ನು ತಿಳಿದುಕೊಳ್ಳಬೇಕು.

TET ಅಥವಾ C TET ಅರ್ಹತೆ ಕಡ್ಡಾಯ

ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಷಯದ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) ಪತ್ರಿಕೆ-2 ಅಥವಾ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಪರೀಕ್ಷೆಯಲ್ಲಿ ಕಡ್ಡಾಯ ಅರ್ಹತೆಯನ್ನು ಪಡೆದಿರಬೇಕು.

ಆದರೆ ಗಣಕಯಂತ್ರ ವಿಭಾಗ, ದೈಹಿಕ ಶಿಕ್ಷಣ ವಿಭಾಗ ಮತ್ತು ಚಿತ್ರಕಲಾ ಶಿಕ್ಷಕರ ಹುದ್ದೆಗಳಿಗೆ TET ಅಥವಾ C TET ಅರ್ಹತೆ ಅಗತ್ಯವಿಲ್ಲ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ ಎಲ್ಲಾ ಹುದ್ದೆಗಳಿಗೂ ಸಹ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ಅದಕ್ಕಿಂತ ಮೇಲಿನ ಹಂತದಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕು.

 

KREIS Recruitment ವಯೋಮಿತಿ

ಮಾಹಿತಿ ಮೂಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ನೇಮಕಾತಿ ಅಧಿಸೂಚನೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.

ಸರ್ಕಾರದ ವಯೋಮಿತಿ ಸಡಿಲಿಕೆ ಆದೇಶದಂತೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ಪರಿಷ್ಕೃತ ಗರಿಷ್ಠ ವಯೋಮಿತಿ ಈ ಕೆಳಕಂಡಂತಿದೆ

ಸಾಮಾನ್ಯ ಅರ್ಹತೆ: 45 ವರ್ಷಗಳು

ಇತರೆ ಹಿಂದುಳಿದ ವರ್ಗಗಳ 2ಎ 2ಬಿ 3ಎ 3ಬಿ ಅರ್ಹತೆ: 48 ವರ್ಷಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ವರ್ಗದ ಅರ್ಹತೆ: 50 ವರ್ಷಗಳು

ಮಾಜಿ ಸೈನಿಕರು ವಿಶೇಷ ಚೇತನ ಅಭ್ಯರ್ಥಿಗಳು ಮತ್ತು ವಿಧವಾ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ಹೆಚ್ಚುವರಿ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಮೀಸಲಾತಿ ವರ್ಗಕ್ಕೆ ಸಂಬಂಧಿಸಿದ ವಯೋಮಿತಿ ನಿಯಮಗಳನ್ನು ಅರ್ಜಿ ಸಲ್ಲಿಸುವ ಮೊದಲೇ ಕಡ್ಡಾಯವಾಗಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪರಿಶೀಲಿಸಿಕೊಳ್ಳಬೇಕು.

KREIS Recruitment ವೇತನ ಶ್ರೇಣಿ

ಮಾಹಿತಿ ಮೂಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ನೇಮಕಾತಿ ಅಧಿಸೂಚನೆ

 

ಈ KREIS Recruitment ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಶ್ರೇಣಿಯಂತೆ ಉತ್ತಮ ರೀತಿಯ ಸಂಬಳವನ್ನು ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಖಾಯಂ ಪೂರ್ವ ಅವಧಿಯಲ್ಲಿ ಸೇವೆಯನ್ನು ಸಲ್ಲಿಸಬೇಕಾಗುತ್ತದೆ.

ವಿವಿಧ ವಿಷಯಗಳ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು

ವೇತನ ಶ್ರೇಣಿ: ರೂ. 54,175 – 1,375 – 58,300 – 1,500 – 64,300 – 1,650 – 74,200 – 1,900 – 85,600 – 2,300 – 99,400

ಪದವೀಧರ ಮತ್ತು ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು

ವೇತನ ಶ್ರೇಣಿ: ರೂ. 49,050 – 1,250 – 52,800 – 1,375 – 58,300 – 1,500 – 64,300 – 1,650 – 74,200 – 1,900 – 85,600 – 2,300 – 92,500

ಮೂಲ ವೇತನದ ಜೊತೆಯಲ್ಲಿ ಸರ್ಕಾರದ ನಿಯಮಗಳ ಪ್ರಕಾರ ವಿವಿಧ ರೀತಿಯ ಭತ್ಯೆಗಳು ಮತ್ತು ಇತರ ರೀತಿಯ ಸರ್ಕಾರಿ ಸೌಲಭ್ಯಗಳು ದೊರೆಯುತ್ತವೆ

ಅರ್ಜಿ ಶುಲ್ಕದ ವಿವರಗಳು

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ಮೀಸಲಾತಿ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ವರ್ಗಗಳ 2ಎ 2ಬಿ 3ಎ 3ಬಿ ಅಭ್ಯರ್ಥಿಗಳು: 750/- ರೂಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು: 500/- ರೂಗಳು

ವಿಶೇಷ ಚೇತನ ಅಭ್ಯರ್ಥಿಗಳು: 250/- ರೂಗಳು

ಒಬ್ಬ ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದರೆ ಪ್ರತಿ ಹೆಚ್ಚುವರಿ ಹುದ್ದೆಗೆ 100/- ರೂಗಳ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ವಿಧಾನಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕವೇ ಪಾವತಿಸಬೇಕು

 

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಗೊಂಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಂತ ಹಂತವಾದ ವಿಧಾನಗಳನ್ನು ಈ ಕೆಳಗೆ ನೀಡಲಾಗಿದೆ. ಈ ಹಂತಗಳನ್ನು ಅನುಸರಿಸಿ ಯಶಸ್ವಿಯಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹಂತ-1: ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್‌ ಗೆ ಭೇಟಿ ನೀಡಬೇಕು. ನಂತರ ನೇಮಕಾತಿ ವಿಭಾಗಕ್ಕೆ ಹೋಗಿ ಅಲ್ಲಿ KREIS ಶಿಕ್ಷಕರ ನೇಮಕಾತಿ 2026 ಎಂಬ ಲಿಂಕನ್ನು ಆಯ್ಕೆ ಮಾಡಿಕೊಳ್ಳಬೇಕು.

ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ಮೊದಲು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಹಂತ-2: ನಿಗಧಿತ ಹುದ್ದೆಗಳಿಗೆ ಹೊರಡಿಸಲಾಗಿರುವ ಅಧಿಕೃತ ಅಧಿಸೂಚನೆಯನ್ನು ತೆರೆದು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅರ್ಹತೆ ಮಾನದಂಡಗಳನ್ನು ಪರಿಶೀಲಿಸಿಕೊಳ್ಳಬೇಕು.

ನಂತರ ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಎಂಬ ಆಯ್ಕೆಯನ್ನು ಆಯ್ದುಕೊಂಡ ನಂತರ ಅರ್ಜಿಯು ತೆರೆಯುತ್ತದೆ. ನಂತರ ಅಲ್ಲಿ  ಈ ಕೆಳಕಂಡ ವಿವರಗಳನ್ನು ನಮೂದಿಸಿ

  • ವೈಯಕ್ತಿಕ ವಿವರಗಳು
  • ಶೈಕ್ಷಣಿಕ ವಿವರಗಳು
  • ಅಗತ್ಯವಿರುವ ಪ್ರಮಾಣಪತ್ರದ ವಿವರಗಳು
  • ಸಂವಹನ ಉದ್ದೇಶಕ್ಕಾಗಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ
  • ವಿಳಾಸದ ವಿವರಗಳು

ಮುಂತಾದ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ನಮೂದಿಸಬೇಕು. ಎಲ್ಲ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕು

ನಂತರ ನಿಮ್ಮ ಮೊಬೈಲ್ ನಂಬರಿಗೆ ನೋಂದಣಿ ಸಂಖ್ಯೆ ಮತ್ತು ಅರ್ಜಿ ಸಲ್ಲಿಕೆ ವಿವರಗಳು ಬರುತ್ತವೆ

ಹಂತ-3: ನಂತರ ನೇಮಕಾತಿಯ ಮುಖಪುಟಕ್ಕೆ ಬಂದು ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಲು ನೀಡಲಾಗಿರುವ ಪ್ರತ್ಯೇಕ ಲಿಂಕ್‌ ಅನ್ನು ತೆರೆದು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಲಾಗಿನ್ ಆಗಿ

ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಲು ನಿಗದಿಪಡಿಸಲಾಗಿರುವ ನಿಯಮಗಳಿಗೆ ಅನುಸಾರ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಸ್ಥಳಗಳಲ್ಲಿ ಅಪ್ಲೋಡ್ ಮಾಡಿ

ಹಂತ-4: ನಂತರ ನೇಮಕಾತಿ ಮುಖಪುಟಕ್ಕೆ ಬಂದು ಅರ್ಜಿ ಶುಲ್ಕ ಪಾವತಿಸಲು ನೀಡಲಾಗಿರುವ ಪ್ರತ್ಯೇಕ ಲಿಂಕ್‌ ಅನ್ನು ತೆರೆಯಬೇಕು

ಅರ್ಜಿ ಶುಲ್ಕ ಪಾವತಿ ಲಿಂಕ್‌ ಅನ್ನು ತೆರೆದ ನಂತರ ನಿಗದಿಪಡಿಸಲಾಗಿರುವ ಮೊತ್ತವನ್ನು ಆನ್ ಲೈನ್ ವಿಧಾನಗಳನ್ನು ಬಳಸುವುದರ ಮೂಲಕ ಪಾವತಿ ಮಾಡಬೇಕು

ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಶುಲ್ಕ ರಶೀದಿಯನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು

ಹಂತ-5: ನಂತರ ನೇಮಕಾತಿಯ ಮುಖಪುಟಕ್ಕೆ ಬಂದು ಅರ್ಜಿ ಮುದ್ರಿಸು ಎಂಬ ಆಯ್ಕೆಯನ್ನು ಆಯ್ದುಕೊಂಡು ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸುವ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಭವಿಷ್ಯದ ಉದ್ದೇಶಕ್ಕಾಗಿ ನಿಮ್ಮ ಮೊಬೈಲ್ ಅಥವಾ ಲ್ಯಾಪ್ ಟಾಪ್ ನಲ್ಲಿ ಒಂದು ಪ್ರತಿಯನ್ನು ಸೇವೆ ಮಾಡಿ ಇಟ್ಟುಕೊಳ್ಳಿ.

ಅರ್ಜಿಯನ್ನು ಸಲ್ಲಿಸುವ ಮೊದಲು ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ, ವರ್ಗ, TET ಮತ್ತು C TET ವಿವರಗಳಲ್ಲಿ ತಪ್ಪುಗಳಿದ್ದರೆ ಮೊದಲು ಸರಿಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು

ನೇಮಕಾತಿ ಆಯ್ಕೆ ವಿಧಾನ

ಮಾಹಿತಿ ಮೂಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ನೇಮಕಾತಿ ಅಧಿಸೂಚನೆ

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯು ಆಫ್ ಲೈನ್ ಒಎಂಆರ್ ಮಾದರಿಯಲ್ಲಿ ನಡೆಯುತ್ತದೆ ಅಭ್ಯರ್ಥಿಗಳು ಈ ಕೆಳಕಂಡ ಆಯ್ಕೆ ಹಂತಗಳನ್ನು ಪಾಲಿಸಬೇಕಾಗುತ್ತದೆ

  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
  • ಸ್ಪರ್ಧಾತ್ಮಕ ಪರೀಕ್ಷೆ
  • ಅರ್ಹತಾ ಪರಿಶೀಲನೆ
  • ದಾಖಲೆ ಪರಿಶೀಲನೆ
  • ಅಂತಿಮ ಆಯ್ಕೆ

 

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ

ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಹಂತದಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದದೇ ಇದ್ದರೆ ಈ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ

ಈ ಪರೀಕ್ಷೆಯು ಒಟ್ಟು 150 ಅಂಕಗಳ ಪರೀಕ್ಷೆಯಾಗಿದ್ದು, ಕನಿಷ್ಠ ಅರ್ಹತಾ ಅಂಕಗಳಾಗಿ 50 ಅಂಕಗಳನ್ನು ಪಡೆಯಬೇಕು.

ಸ್ಪರ್ಧಾತ್ಮಕ ಪರೀಕ್ಷೆ

ಈ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ

ಪತ್ರಿಕೆ -1: ಸಾಮಾನ್ಯ ಜ್ಞಾನ

ಈ ಪತ್ರಿಕೆಯಲ್ಲಿ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಹಲವು ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಭಾರತ ಹಾಗೂ ಕರ್ನಾಟಕದ ಇತಿಹಾಸ, ಭೂಗೋಳ, ಭಾರತದ ಸಂವಿಧಾನ, ವಿಜ್ಞಾನ, ಪ್ರಚಲಿತ ಘಟನೆಗಳು, ಸರ್ಕಾರಿ ಯೋಜನೆಗಳು ಹಾಗೂ ಇತರ ಪ್ರಮುಖ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಪತ್ರಿಕೆ -2: ವಿಷಯಾಧಾರಿತ ಪರೀಕ್ಷೆ

ನಿರ್ದಿಷ್ಟ ಪತ್ರಿಕೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಹುದ್ದೆಗೆ ಅನುಗುಣವಾಗಿ ವಿಷಯದ ಪ್ರಶ್ನೆಗಳನ್ನು ಕೇಳಲಾಗುತ್ತದೆ ಉದಾಹರಣೆಗೆ

  • ಕನ್ನಡ ಶಿಕ್ಷಕರಿಗೆ ಕನ್ನಡ ವಿಷಯ
  • ಇಂಗ್ಲಿಷ್ ಶಿಕ್ಷಕರಿಗೆ ಇಂಗ್ಲಿಷ್ ವಿಷಯ
  • ಗಣಿತ ಶಿಕ್ಷಕರಿಗೆ ಗಣಿತ ವಿಷಯ
  • ವಿಜ್ಞಾನ ಶಿಕ್ಷಕರಿಗೆ ವಿಜ್ಞಾನ ವಿಷಯ
  • ಸಮಾಜ ವಿಜ್ಞಾನ ಶಿಕ್ಷಕರಿಗೆ ಸಮಾಜ ವಿಜ್ಞಾನ ವಿಷಯ

ಈ ಪತ್ರಿಕೆಯು 100 ಅಂಕಗಳನ್ನು ಹೊಂದಿದ್ದು, ಪ್ರತಿ ಪತ್ರಿಕೆಗೆ ಎರಡು ಗಂಟೆಗಳ ಅವಧಿಯನ್ನು ನೀಡಲಾಗುತ್ತದೆ.

ನೆಗೆಟಿವ್ ಮಾರ್ಕಿಂಗ್

ಈ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಗಳಿಗೆ ನೆಗೆಟಿವ್ ಮಾರ್ಕಿಂಗ್ ಇರುತ್ತದೆ. ಅಭ್ಯರ್ಥಿಗಳು ನೀಡುವ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ

ನೆಗೆಟಿವ್ ಮಾರ್ಕಿಂಗ್ ಇರುವುದರಿಂದ ಅಭ್ಯರ್ಥಿಗಳು ಪ್ರಶ್ನೆಗಳನ್ನು ಸಂಪೂರ್ಣವಾಗಿ ಓದಿ ಖಚಿತವಾದ ಉತ್ತರಗಳನ್ನು ನೀಡುವುದು ಉತ್ತಮವಾಗಿದೆ. ಊಹಾತ್ಮಕ ಉತ್ತರಗಳನ್ನು ಹೆಚ್ಚು ನೀಡುವುದು ಅಥವಾ ಗುರುತಿಸುವುದರಿಂದ ಒಟ್ಟು ಅಂಕಗಳ ಮೇಲೆ ಪರಿಣಾಮ ಬೀರಬಹುದು.

ಈ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯಲು ಒಟ್ಟು ಅಂಕಗಳಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

ಅರ್ಹತಾ ಪರಿಶೀಲನೆ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳನ್ನು ಅರ್ಹತಾ ಪರಿಶೀಲನೆಗೆ ಕರೆಯಲಾಗುತ್ತದೆ. ಇಲ್ಲಿ ಬೋಧನಾ ಕ್ರಮದ ಬಗ್ಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ದಾಖಲೆ ಪರಿಶೀಲನೆ

ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಸಲ್ಲಿಸಿರುವ ಎಲ್ಲ ದಾಖಲಾತಿಗಳನ್ನು ಇಲ್ಲಿ ಪರೀಕ್ಷೆ ಮಾಡಲಾಗುತ್ತದೆ ಮತ್ತು ಗುಣಮಟ್ಟವನ್ನು ಇಲ್ಲಿ ಪರೀಕ್ಷಿಸಲಾಗುತ್ತದೆ. ಸಾಮಾನ್ಯವಾಗಿ ಪರಿಶೀಲಿಸಲಾಗುವ ದಾಖಲೆಗಳೆಂದರೆ

  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ವಿಷಯವಾರು ಶೈಕ್ಷಣಿಕ ಅರ್ಹತೆ ಪ್ರಮಾಣಪತ್ರಗಳು
  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿವಾಸ ಪ್ರಮಾಣ ಪತ್ರ
  • ಮೀಸಲಾತಿ ದಾಖಲೆಗಳು
  • ಹೆಚ್ಚುವರಿ ದಾಖಲಾತಿಗಳು

ಅಂತಿಮ ಆಯ್ಕೆ

ಮೇಲಿನ ಎಲ್ಲಾ ಆಯ್ಕೆ ಪ್ರತಿ ಎಲ್ಲ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ ನಂತರ ವಿವಿಧ ವಸತಿ ಶಾಲೆಗಳಲ್ಲಿ ನಿಯೋಜನೆಗೊಳಿಸಲಾಗುತ್ತದೆ

 

ಪರೀಕ್ಷೆ ತಯಾರಿ ಹೀಗಿರಲಿ

ಈ KREIS Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ಪಠ್ಯಕ್ರಮವನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಳ್ಳಬೇಕು. ವಿಷಯಧಾರಿತ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದು ಅಂತಿಮ ಆಯ್ಕೆ ಪಟ್ಟಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಮೊದಲಿಗೆ ಅಭ್ಯರ್ಥಿಗಳು ತಾವು ಆಯ್ಕೆ ಮಾಡಿದ ವಿಷಯದ ಮೂಲಭೂತ ಪರಿಕಲ್ಪನೆಗಳನ್ನು ಬಲಪಡಿಸಬೇಕಾಗುತ್ತದೆ. ನಂತರ ಹಿಂದಿನ ವರ್ಷದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನೂ ಸಹ ಅಭ್ಯಾಸ ಮಾಡಬೇಕಾಗುತ್ತದೆ.

ಪ್ರತಿದಿನವೂ ಅಧ್ಯಯನ ಮಾಡುವ ವೇಳಾಪಟ್ಟಿಯಲ್ಲಿ ಈ ಕೆಳಗಿಂದ ಅಂಶಗಳಿಗೆ ಸಮಯವನ್ನು ಮೀಸಲಿಡಬಹುದು.

  • ಸಾಮಾನ್ಯ ಜ್ಞಾನ
  • ಕರ್ನಾಟಕದ ಇತಿಹಾಸ ಮತ್ತು ಭೂಗೋಳ
  • ಭಾರತೀಯ ಸಂವಿಧಾನ
  • ಪ್ರಚಲಿತ ಘಟನೆಗಳು
  • ವಿಷಯಾಧಾರಿತ ಅಧ್ಯಯನ
  • ಮಾದರಿ ಪ್ರಶ್ನೆಪತ್ರಿಕೆಗಳ ಅಭ್ಯಾಸ

ಈ ಪರೀಕ್ಷೆಯಲ್ಲಿ ನೆಗೆಟಿವ್ ಮಾರ್ಕಿಂಗ್ ಇರುವುದರಿಂದ ಸಮಯ ನಿರ್ವಹಣೆ ಮತ್ತು ಸರಿಯಾದ ಉತ್ತರ ಆಯ್ಕೆ ಮಾಡುವುದು ಸಹ ಮುಖ್ಯವಾಗಿದೆ

KREIS Recruitment Important Dates

ಈ KREIS Recruitment ಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರ ಈ ಕೆಳಕಂಡಂತಿದೆ

ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ 15.07.2026
ಆನ್‌ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13.08.2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 14.08.2026

 

ಅಭ್ಯರ್ಥಿಗಳು ಕೊನೆ ದಿನಾಂಕದವರೆಗೂ ಕಾಯದೇ ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ. ಏಕೆಂದರೆ ಕೊನೆಯ ದಿನಗಳಲ್ಲಿ ವೆಬ್ ಸೈಟ್‌ ನಲ್ಲಿ ತಾಂತ್ರಿಕ ಸಮಸ್ಯೆಗಳು ಅಥವಾ ಹೆಚ್ಚಿನ ಪ್ರಮಾಣದ ಟ್ರಾಫಿಕ್ ಉಂಟಾದರೆ ಅರ್ಜಿಯನ್ನು ಸಲ್ಲಿಸುವುದು ಕಷ್ಟಕರವಾಗುತ್ತದೆ, ಆದ್ದರಿಂದ ಕೊನೆಯ ದಿನಾಂಕದವರೆಗೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಿದರೆ ಯಶಸ್ವಿಯಾಗಿ ಮತ್ತು ಯಾವುದೇ ತೊಂದರೆಗಳಿಲ್ಲದೆ ಅರ್ಜಿಯನ್ನು ಸಲ್ಲಿಸಬಹುದು.

KREIS Recruitment: FAQ’s (ಪದೇ ಪದೇ ಕೇಳಲಾಗುವ ಪ್ರಶ್ನೆಗಳು)

 

1. KREIS Recruitment2026 ರಲ್ಲಿ ಎಷ್ಟು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ?

ಉತ್ತರ: ಈ ನೇಮಕಾತಿಯಲ್ಲಿ ಒಟ್ಟು 1,087 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

2. ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಉತ್ತರ: ಅಭ್ಯರ್ಥಿಗಳು 13 ಆಗಸ್ಟ್ 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

3. ಅರ್ಜಿ ಶುಲ್ಕವನ್ನು ಯಾವ ದಿನಾಂಕದೊಳಗೆ ಪಾವತಿ ಮಾಡಬೇಕು?

ಉತ್ತರ: ಆನ್‌ ಲೈನ್ ಅರ್ಜಿ ಶುಲ್ಕವನ್ನು 14 ಆಗಸ್ಟ್ 2026‌ ರ ಮೊದಲು ಪಾವತಿಸಬೇಕು.

4. TET ಅಥವಾ C TET ಪರೀಕ್ಷೆ ಉತ್ತೀರ್ಣವಾಗುವುದು ಕಡ್ಡಾಯವೇ?

ಉತ್ತರ: ಹೌದು. ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು TET ಪತ್ರಿಕೆ-2 ರಲ್ಲಿ ಅಥವಾ C TET ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

5. ಕಂಪ್ಯೂಟರ್ ಶಿಕ್ಷಕರ ಹುದ್ದೆಗೆ TET ಅರ್ಹತೆ ಅಗತ್ಯವಿದೆಯೇ?

ಉತ್ತರ: ಇಲ್ಲ. ಅಧಿಕೃತ ಮಾಹಿತಿಯ ಪ್ರಕಾರ ಕಂಪ್ಯೂಟರ್ ಶಿಕ್ಷಕರ ಹುದ್ದೆಗೆ TET ಅಥವಾ C TET ಅರ್ಹತೆ ಅಗತ್ಯವಿಲ್ಲ.

6. ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ಅಂಕ ಕಡಿತ ಮಾಡಲಾಗುತ್ತದೆಯೇ?

ಉತ್ತರ: ಹೌದು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೀಡಿದ ಪ್ರತಿಯೊಂದು ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

7. ಕನ್ನಡ ಮಾಧ್ಯಮದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವವರು ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದೇ?

ಉತ್ತರ: ಇಲ್ಲ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪದವಿ ಶಿಕ್ಷಣವನ್ನು ಆಂಗ್ಲ ಮಾಧ್ಯಮದಲ್ಲಿಯೆ ಪೂರ್ಣಗೊಳಿಸಿರಬೇಕು.

8. ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದೇ?

ಉತ್ತರ: ಇಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರವೇ ಪಾವತಿಸಬೇಕು. ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ವಿಧಾನಗಳನ್ನು ಬಳಸಿ ಶುಲ್ಕ ಪಾವತಿಸಬಹುದು.

 

External Official Links

Updated And Verified By Author: 22 July 2026

Published Date: 22 July 2026

Reviewed By: Ranganatha B G (Author)

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಧಿಕೃತ ವೆಬ್‌ ಸೈಟ್
ನೇಮಕಾತಿ ಅಧಿಸೂಚನೆಯ ಪಿಡಿಎಫ್  

KREIS Recruitment RPC

KREIS Recruitment KK

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್ ಅರ್ಜಿ ಸಲ್ಲಿಕೆ

 

Additional Links:

ನಮ್ಮ ವಾಟ್ಸಪ್ ಗುಂಪನ್ನು ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚುವರಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಅನ್ನು ಅನುಸರಿಸಿ newsbymr

 

ಕೊನೆಯ ಮಾತು

ಕರ್ನಾಟಕದ ವಸತಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ KREIS Recruitment ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 1087 ಹುದ್ದೆಗಳಿಗೆ ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳಿಗೆ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಯನ್ನು ಆಯ್ಕೆ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿ ಮೂಲಕ ಆಯ್ಕೆ ಹಾಗೂ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿಯನ್ನು ನೀಡುವುದರ ಜೊತೆಯಲ್ಲಿ ಸರ್ಕಾರಿ ಉದ್ಯೋಗದ ಸ್ಥಿರತೆ ಮತ್ತು ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯುತ್ತದೆ. ಆದ್ದರಿಂದ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಪರಿಶೀಲಿಸಿ ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಂಡ ನಂತರ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಉತ್ತಮ.

ಅರ್ಜಿಯನ್ನು ಸಲ್ಲಿಸುವಾಗ ಯಾವುದೇ ರೀತಿಯ ತಪ್ಪು ಮಾಹಿತಿಯನ್ನು ನೀಡಬಾರದು. ವಿಶೇಷವಾಗಿ ವಿಷಯವಾರು ವಿದ್ಯಾರ್ಹತೆ ಅಥವಾ TET ಮತ್ತು C TET ಅರ್ಹತೆ, ಕನ್ನಡ ಭಾಷಾ ಅಧ್ಯಯನ ಮತ್ತು ಮಾಧ್ಯಮಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಮತ್ತು ಅವುಗಳಿಗೆ ಸಂಬಂಧಿಸಿದ ನಿಯಮಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.

 

Related Information: Recruitments

KSRP Recruitment 2026

Land Surveyor Recruitment 2026

Karnatakata Forest Department Recruitment 2026

KEA VAO Recruitment 2026

City Civil Court Recruitment 2026

 

 

Author Note: ಈ ಲೇಖನದಲ್ಲಿ KEA ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ 2026ಕ್ಕೆ ಸಂಬಂಧಿಸಿದ ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಪ್ರಮುಖ ದಿನಾಂಕಗಳ ಮಾಹಿತಿಯನ್ನು ಸರಳವಾಗಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.

About Author: ರಂಗನಾಥ ಬಿ ಜಿ ರವರು ಅರ್ಥಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಕಳೆದ 3 ವರ್ಷಗಳಿಂದ ಸರ್ಕಾರಿ ಉದ್ಯೋಗ, ಶಿಕ್ಷಣ, ನೇಮಕಾತಿ ಮತ್ತು ವಿದ್ಯಾರ್ಥಿಗಳ ವೃತ್ತಿ ಮಾರ್ಗದರ್ಶನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸರಳ ಕನ್ನಡದಲ್ಲಿ ನೀಡುವ ವಿಷಯ ಬರಹಗಾರರಾಗಿದ್ದಾರೆ. ಅಧಿಕೃತ ಮಾಹಿತಿಯನ್ನು ಆಧರಿಸಿ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತ, ನಿಖರ ಮತ್ತು ಸುಲಭವಾಗಿ ಅರ್ಥವಾಗುವ ಲೇಖನಗಳನ್ನು ಪ್ರಕಟಿಸುತ್ತಾರೆ.

Disclaimer: ಈ ಲೇಖನದಲ್ಲಿರುವ ಮಾಹಿತಿಯನ್ನು ಲಭ್ಯವಿರುವ ನೇಮಕಾತಿ ವಿವರಗಳ ಆಧಾರದ ಮೇಲೆ ನೀಡಲಾಗಿದೆ. ಹುದ್ದೆಗಳು, ಅರ್ಹತೆ, ದಿನಾಂಕಗಳು ಮತ್ತು ನಿಯಮಗಳಲ್ಲಿ ಬದಲಾವಣೆ ಸಾಧ್ಯವಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು KEA ಮತ್ತು KREIS ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅದರಲ್ಲಿರುವ ಅಂತಿಮ ನಿಯಮಗಳನ್ನು ಮಾತ್ರ ಅನುಸರಿಸಬೇಕು.

ರಂಗನಾಥ ಬಿ.ಜಿ ಅವರು ಅರ್ಥಶಾಸ್ತ್ರದಲ್ಲಿ ಎಂ.ಎ ಪದವೀಧರರಾಗಿದ್ದು, ಕಳೆದ ಎರಡು ವರ್ಷಗಳಿಂದ ನೈಜ ಹಾಗೂ ವಿಶ್ವಾಸಾರ್ಹ ಕನ್ನಡ ವಿಷಯಗಳನ್ನು ಪ್ರಕಟಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ ಮಾಹಿತಿ, ಪರೀಕ್ಷಾ ತಯಾರಿ ಸಲಹೆಗಳು, ವೃತ್ತಿ ಮಾರ್ಗದರ್ಶನ, ಸರ್ಕಾರಿ ಯೋಜನೆಗಳು ಹಾಗೂ ಟ್ರೆಂಡಿಂಗ್ ಸುದ್ದಿಗಳ ಕುರಿತು ಲೇಖನಗಳನ್ನು ಬರೆಯುವಲ್ಲಿ ಪರಿಣತಿ ಹೊಂದಿದ್ದು, ಓದುಗರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ಇವರ ಉದ್ದೇಶವಾಗಿದೆ. Please Visit NewsByMr

Leave a Comment