ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ (KSLSA Recruitments 2026)
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇಲ್ಲಿ ಇರುವ 17 (ಉಳಿಕೆ ಮೂಲ ವೃಂದ) ೦2 (ಕಲ್ಯಾಣ ಕರ್ನಾಟಕ ವೃಂದ) ಶಾಖಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಈ ಕೆಳಗಿನ ಪಡಿಸುವ ಅಗತ್ಯ ಮತ್ತು ಇತರೆಗಳನ್ನು ಪೂರೈಸುವಂತಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ತನ್ನ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸೂಚನೆ ಈ ನೇಮಕಾತಿಯು ಉಚ್ಚ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ.
ವೇತನ ಶ್ರೇಣಿ : 69250-1650-74200-1900-85600-2300-99400-2700-115600-3100-134200.
KSLSA Recruitments ನೇಮಕಾತಿ ವಿಧಾನ.
ಕರ್ನಾಟಕ ರಾಜ್ಯ ಕಾನೂನು ಸವೆಗಳ ಪ್ರಾಧಿಕಾರದ ನೇಮಕಾತಿಗೆ ಅಭ್ಯರ್ಥಿಗಳನ್ನು ಈ ಕೆಳಗಿನ ನಿಯಮಗಳ ಅನುಸಾರ ನೇಮಕಾತಿ ಮಾಡಲಾಗುತ್ತದೆ.
- ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ 1987.
- ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮಗಳು 1977.
- ಕರ್ನಾಟಕ ಪರಿಶಿಷ್ಟ ಜಾತಿಗಳು ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳು ನೇಮಕಾತಿ ಮೀಸಲಾತಿ ಇತ್ಯಾದಿ.
ಈ KSLSA Recruitments ನೇಮಕಾತಿಗೆ ಸಂಬಂಧಿಸಿದ ಸುತ್ತೋಲೆಗಳು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿಯ ಸರ್ಕಾರದ ಸುತ್ತೋಲೆಗಳು ಹಾಗೂ ಅಧಿಸೂಚನೆಗಳು.
- ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವ ಬಗ್ಗೆ ಒಂದು ಬಾರಿಯ ಕ್ರಮವಾಗಿ ದಿನಾಂಕ 29-01-2026ರ ಅಧಿಸೂಚನೆ.
- ಅಭ್ಯರ್ಥಿಯು ಗ್ರಾಮೀಣ ಮೀಸಲಾತಿ ಸೌಲಭ್ಯ ಕೋರುವ ಬಗ್ಗೆ ಹೊರಡಿಸಲಾದ ಅಧಿಸೂಚನೆ ದಿನಾಂಕ 13-02-2001.
- ಸೇವಾ ನಿರತ ಅಭ್ಯರ್ಥಿಯ ನಿರಪೇಕ್ಷಣ ಪ್ರಮಾಣ ಪತ್ರದ ಬಗ್ಗೆ ಹೊರಡಿಸಿದ ಅಧಿಸೂಚನೆ ದಿನಾಂಕ 12-10-2020.
KSLSA Recruitments ಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕಾನೂನು ಪದವಿ ಎಲ್ ಎಲ್ ಬಿ ಯನ್ನ ಪಡೆದಿರಬೇಕಾಗುತ್ತದೆ.
KSLSA Recruitments ಗೆ ಸಂಬಂಧಿಸಿದ ವಯೋಮಿತಿ ವಿವರ
ಸಾಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಕಡಿಮೆ ಇಲ್ಲದ ಹಾಗೂ ಈ ಕೆಳಕಂಡಂತೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು ವಯೋಮಿತಿ ಸಡಿಲಿಕೆಯ ಮಾಹಿತಿ ಈ ಕೆಳಕಂಡಂತಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 40 ವರ್ಷಗಳು
ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 43 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 45 ವರ್ಷಗಳು
ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮಗಳು ಪ್ರಕಾರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಡಿಲಿಕೆಯನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
KSLSA Recruitments ನ ಅರ್ಜಿ ಶುಲ್ಕ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆನ್ಲೈನ್ ಅರ್ಜಿಯಲ್ಲಿ ತಿಳಿಸಿರುವಂತೆ ಯುಪಿಐ ನೆಟ್ ಬ್ಯಾಂಕಿಂಗ್ ಡೆಬಿಟ್ ಕಾರ್ಡ್ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರ ಈ ಕೆಳಕಂಡಂತಿರುತ್ತದೆ.
ಸಾಮಾನ್ಯ ಅಭ್ಯರ್ಥಿ, ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 1000/- ರೂಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1 ಹಾಗೂ ನಿರ್ದಿಷ್ಟ ಅಂಗವಿಕಲ ಅಭ್ಯರ್ಥಿಗಳಿಗೆ : 500/- ರೂಗಳು
ಅರ್ಜಿ ಶುಲ್ಕದ ಬಗೆಗಿನ ಸೂಚನೆಗಳು
- ಅಭ್ಯರ್ಥಿಯು ಕೇವಲ ಒಂದು ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ ಹಾಗೂ ಒಂದಕ್ಕಿಂತ ಹೆಚ್ಚು ಅರ್ಜಿಗಳಿಗೆ ಅವಶ್ಯಕವನ್ನು ಪಾವತಿಸಿದ ನಂತರ ಹಿಂದಿರುಗಿಸಲು ಅವಕಾಶವಿರುವುದಿಲ್ಲ.
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕದಂದು ಆಗಬಹುದಾದ ಸರ್ವ ಸಮಸ್ಯೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಆದಷ್ಟು ಬೇಗ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು.
- ಅಭ್ಯರ್ಥಿಗಳು ದಿನಾಂಕ 15 2018 ರಾತ್ರಿ 11:59 ಗಂಟೆ ಒಳಗೆ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯಲ್ಲಿ ಅಧಿಕೃತವಾಗಿ ಹೊರಡಿಸಲಾಗಿರುವ ಅವಶ್ಯಕತೆಗಳನ್ನು ಪೂರೈಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿರುತ್ತದೆ.
- ಈ ನೇಮಕಾತಿಯಲ್ಲಿ ಸಂದರ್ಶನಕ್ಕೆ ಕರೆಯಲ್ಪಡುವ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ನೋಂದಾಯಿಸಿರುವ ಇ-ಮೇಲ್ ಎಸ್ಎಂಎಸ್ ಅಥವಾ ವಾಟ್ಸಪ್ ಮೂಲಕ ಮಾತ್ರ ತಿಳಿಸಲಾಗುವುದು ಯಾವುದೇ ರೀತಿಯ ಅಂಚೆ ಸಂವಹನ ಇರುವುದಿಲ್ಲ.
KSLSA Recruitments ನ ಸೇವಾ ಪರಿವೀಕ್ಷಣಾ ಅವಧಿ
ಈ ನೇಮಕಾತಿಯ ಮೂಲಕ ನೇಮಕಗೊಂಡ ಅಭ್ಯರ್ಥಿಯು ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದಲ್ಲಿ ವಿಸ್ತರಿಸಬಹುದಾದ ಅವರಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
KSLSA Recruitments ನ ಆಯ್ಕೆ ವಿಧಾನ

1. ಸ್ಪರ್ಧಾತ್ಮಕ ಪರೀಕ್ಷೆ
ಈ ಪರೀಕ್ಷೆಯಲ್ಲಿ ಅಭ್ಯರ್ಥಿಯು ಮೇಲಿನ ಹುದ್ದೆಗೆ ಹೊಂದಿರಬೇಕಾದ ಜ್ಞಾನವನ್ನು ಪರೀಕ್ಷಿಸಲಾಗುತ್ತದೆ
2. ಸಂದರ್ಶನ
ಸಂದರ್ಶನದಲ್ಲಿ ವ್ಯಕ್ತಿಗಳಿಗೆ ಹುದ್ದೆಯ ಬಗ್ಗೆ ಇರುವ ಆಸಕ್ತಿ ಹಾಗೂ ಜ್ಞಾನದ ವ್ಯಕ್ತಿತ್ವದ ಪರೀಕ್ಷೆಗಳನ್ನು ನಡೆಸಲಾಗುತ್ತದೆ
ಪ್ರಮುಖ ಸೂಚನೆ
- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಥೈಸಿಕೊಂಡು ಅರ್ಹತ ಮತ್ತು ಇತರ ವ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಹಾಗೂ ಒದಗಿಸಿರುವ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಆನ್ ಲೈನ್ ಅರ್ಜಿಯಲ್ಲಿ ಮಾಹಿತಿಯನ್ನು ಒದಗಿಸುವಾಗ ಅಭ್ಯರ್ಥಿಗಳು ಸಂಬಂಧಪಟ್ಟ ಅಂಕಪಟ್ಟಿಗಳು ಮತ್ತು ಶೈಕ್ಷಣಿಕರಹತೆ, ಮೀಸಲಾತಿಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಎಚ್ಚರಿಕೆಯಿಂದ ಮಾಹಿತಿಯನ್ನು ನಮ್ಮದು ಮಾಡಬೇಕಾಗಿರುತ್ತದೆ ಹಾಗೂ ಅಪ್ಲೋಡ್ ಮಾಡಲು ಕೇಳಲಾದ ದಾಖಲಾತಿಗಳ ಗರಿಷ್ಠ ಗಾತ್ರವನ್ನು ಗಮನದಲ್ಲಿಟ್ಟುಕೊಂಡು ಅಪ್ಲೋಡ್ ಮಾಡಬೇಕಾಗುತ್ತದೆ.
- ಎಲ್ಲ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಒಂದಲ್ಲ ಎರಡು ಬಾರಿ ಪರಿಶೀಲಿಸಿ ಮಾಹಿತಿ ಹಾಗೂ ಅಪ್ಲೋಡ್ ಮಾಡಲಾಗಿರುವ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನೇಮಕಾತಿಗೆ (KSLSA Recruitments) ಅರ್ಜಿ ಸಲ್ಲಿಸುವ ವಿಧಾನ

- ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ ಅಧಿಕೃತ ವೆಬ್ಸೈಟ್ ನಿಂದ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇದನ್ನು ಹೊರತುಪಡಿಸಿ ಅಂಚೆ ಮೂಲಕ ಅಥವಾ ಕಚೇರಿ ಭೇಟಿಯ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪುರಸ್ಕರಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸುವಾಗ ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಉಲ್ಲೇಖಿಸಲಾಗಿರುವ ನೇಮಕಾತಿ ಸೂಚನೆಗೆ ಅನುಗುಣವಾಗಿ ವರ್ಗದ ಅನುಗುಣವಾಗಿ ಶುಲ್ಕವನ್ನು ಪಾವತಿಸತಕ್ಕದ್ದು. ಒಮ್ಮೆ ಸಲ್ಲಿಸಿದ ಅರ್ಜಿಯನ್ನು ತಿದ್ದುಪಡಿಗೆ ಒಳಪಡಿಸಲಾಗುವುದಿಲ್ಲ ಹಾಗೂ ಒಮ್ಮೆ ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
- ಅಭ್ಯರ್ಥಿಯು ಆನ್ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಂವಹನಕ್ಕಾಗಿ ಕಡ್ಡಾಯವಾಗಿ ಸಂಬಂಧಿತ ಕಾಲಂ ಗಳಲ್ಲಿ ಚಾಲ್ತಿಯಲ್ಲಿರುವ ಅಂಚೆ ವಿಳಾಸ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿಯನ್ನು ಒದಗಿಸಬೇಕು ಒಂದು ವೇಳೆ ತಪ್ಪಾದ ಮಾಹಿತಿಯನ್ನು ನಮೂದಿಸಿದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮುಂದೆ ಆಗುವ ಸಮಸ್ಯೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜವಾಬ್ದಾರಿ ಆಗಿರುವುದಿಲ್ಲ.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ನಮೂದಿಸಿ ಅರ್ಜಿಯನ್ನು ಸಲ್ಲಿಸಿ ಹಾಗೂ ಅಪ್ಲೋಡ್ ಗೆ ಕೇಳಲಾದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
KSLSA Recruitments ಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ ಸೈಟ್ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಅಧಿಕೃತ ಅಧಿಸೂಚನೆ ಪಿಡಿಎಫ್ : ಕಲ್ಯಾಣ ಕರ್ನಾಟಕ ವೃಂದ ಉಳಿಕೆ ಮೂಲ ವೃಂದ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : ಕಲ್ಯಾಣ ಕರ್ನಾಟಕ ವೃಂದ ಉಳಿಕೆ ಮೂಲ ವೃಂದ
ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಲು : ಇಲ್ಲಿ ಕ್ಲಿಕ್ ಮಾಡಿ
ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಕಾನೂನು ಪದವಿ ಅಂಕಪಟ್ಟಿ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೀಸಲಾತಿ ಬಗ್ಗೆಗಿನ ದಾಖಲೆಗಳು (ಗ್ರಾಮೀಣ ಅಭ್ಯರ್ಥಿಗಳು ಅಂಗವಿಕಲ ಅಭ್ಯರ್ಥಿಗಳು)
- ಅಭ್ಯರ್ಥಿಯ ಭಾವಚಿತ್ರ ಹಾಗೂ ಸಹಿ
ಕರ್ನಾಟಕ ರಾಜ್ಯ ಕಾನೂನು ಸಲಹೆಗಳ ಪ್ರಾಧಿಕಾರದ ನೇಮಕಾತಿಗೆ ಅರ್ಜಿಯನ್ನು ಭರ್ತಿ ಮಾಡುವಾಗ ಪೂರ್ವ ವೀಕ್ಷಣೆ (ಪ್ರಿವ್ಯೂ ) ಮೂಲಕ ತಪ್ಪಾದ ಮಾಹಿತಿಯನ್ನು ನಮ್ಮ ಸರಿಪಡಿಸಬಹುದು ಆದರೆ ಯಶಸ್ವಿಯಾಗಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಅನ್ನು ತಿದ್ದುಪಡಿ ಮಾಡಲು ಅವಕಾಶವಿಲ್ಲದೆ ಇರುವುದರಿಂದ ಸರಿಯಾದ ಮಾಹಿತಿಯನ್ನು ನಮೂದಿಸಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿ ಅರ್ಜಿಯನ್ನು ಡೌನ್ಲೋಡ್ ಮಾಡಿ ಇಟ್ಟುಕೊಳ್ಳಬೇಕು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಈ ಅಧಿಕೃತ ಅಧಿಸೂಚನೆಯ ನೇಮಕಾತಿಯೂ ಕಾನೂನು ಪದವಿಯನ್ನು ಹೊಂದಿರುವವರಿಗೆ ಹಾಗೂ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶವಾಗಿದೆ ಆದ್ದರಿಂದ ಆದಷ್ಟು ಬೇಗ ಅಧಿಸೂಚನೆಯನ್ನು ಹೋಗಿ ಅರ್ಥೈಸಿಕೊಂಡು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ತಿಳಿದು ಆದಷ್ಟು ಬೇಗ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸುವುದರ ಮೂಲಕ ಯಶಸ್ವಿಯಾಗಿ ತಮ್ಮ ಅರ್ಜಿಯನ್ನು ಸಲ್ಲಿಸಿ, ಈ ಸರ್ಕಾರಿ ಉದ್ಯೋಗವನ್ನು ಪಡೆಯಲು ಈಗಿನಿಂದಲೇ ತಯಾರಿಯನ್ನು ಆರಂಭಿಸಿ.
ಒಟ್ಟಿನಲ್ಲಿ, ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹತೆಗಳನ್ನು ಹೊಂದಿರುವವರು ಸಮಯ ಮೀರಿಸದೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಮುಖ್ಯ. ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ, ಸಿದ್ಧತೆಯೊಂದಿಗೆ ಅರ್ಜಿ ಸಲ್ಲಿಸಿದರೆ ಯಶಸ್ಸಿನ ಸಾಧ್ಯತೆ ಹೆಚ್ಚುತ್ತದೆ.
Read More: Jobs
Mysore District Court Recruitment 2026, Big Opportunity: 93 ಹುದ್ದೆಗಳ ಭರ್ಜರಿ ನೇಮಕಾತಿ ಆರಂಭ
SBI Recruitment 2026, Big Opportunity: ₹3.75 ಲಕ್ಷ ಸಂಬಳದ ಭರ್ಜರಿ ಉದ್ಯೋಗ ಅವಕಾಶ! ಇಂದೇ ಅರ್ಜಿ ಸಲ್ಲಿಸಿ.
India Post Recruitment 2026, Big Opportunity: ₹34,800 ಸಂಬಳ | Degree ಪಾಸ್ ಆದವರಿಗೆ ಗೋಲ್ಡನ್ ಚಾನ್ಸ್!